ಸುಳ್ಯ:ಸುಳ್ಯದ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ವತಿಯಿಂದ 5 ದಿನಗಳ ಕಾಲ ನಡೆದ 58ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದ ಸಮಾಪನದ ಅಂಗವಾಗಿ ಗಣೇಶ ವಿಗ್ರಹದ ವೈಭವದ ವಿಸರ್ಜನಾ ಶೋಭಾಯಾತ್ರೆ ನಡೆಯಿತು.ಕೊನೆಯ ದಿನವಾದ ಶುಕ್ರವಾರ ಬೆಳಿಗ್ಗಿನಿಂದ ಶ್ರೀ ವಿಘ್ನೆಶ್ವೇರನ ಸನ್ನಿಧಿಯಲ್ಲಿ
108 ತೆಂಗಿನಕಾಯಿ ಗಣಪತಿ ಹವನ ನಡೆಯಿತು. ಮಧ್ಯಾಹ್ನ 12ಕ್ಕೆ ಗಣಪತಿ ಹವನದ ಪೂರ್ಣಾಹುತಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ಗಣೇಶ ಮೂರ್ತಿಯ ವಿಸರ್ಜನಾ ಶೋಭಾಯಾತ್ರೆ ನಡೆಯಿತು. ಅಲಂಕೃತ ಮಂಟಪದಲ್ಲಿ, ವಿಶೇಷ ವಾದ್ಯಘೋಷಗಳೊಂದಿಗೆ, ಸುಳ್ಯದ ಪ್ರಮುಖ ಬೀದಿಗಳಲ್ಲಿ ಕುಣಿತ ಭಜನೆಯೊಂದಿಗೆ ಭವ್ಯ ಶೋಭಾಯಾತ್ರೆ ನಡೆಯಿತು. ಸಾರ್ವಜನಿಕ

ಶ್ರೀ ದೇವತಾರಾಧನಾ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಕಂದಡ್ಕ,
ಸಿದ್ಧಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ಧಾರ್ಮಿಕ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ನಡೆಯಿತು. ಸಮಾಜ ಸಂಘಟನೆ ಮತ್ತು ಧರ್ಮ ಜಾಗೃತಿಗಾಗಿ ಗಣೇಶೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.








