ಸುಳ್ಯ:ಕಲ್ಲುಗಳನ್ನು ಕೆತ್ತಿ ಅಪೂರ್ವ ಶಿಲ್ಪಗಳನ್ನಾಗಿ ಶಿಲ್ಪಿಗಳಂತೆ ಶಿಕ್ಷಕರು ಸಮಾಜದಲ್ಲಿ ವ್ಯಕ್ತಿಗಳನ್ನು ರೂಪಿಸುತ್ತಾರೆ.ಶಿಕ್ಷಕರೆಂದರೆ ಪ್ರತಿಯೊಬ್ಬರ ಪಾಲಿನ ಅಮೂಲ್ಯ ರತ್ನಗಳು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಏರ್ಪಡಿಸಿದ ಗುರುವಂಧನಾ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು ಮತ್ತು
ಪ್ರಾಧ್ಯಾಪಕರುಗಳನ್ನು ಗೌರವಿಸಿ ಅವರು ಮಾತನಾಡಿದರು.ಕಳೆದ 75 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಧಾರೆಯೆರೆದು ಸುಶಿಕ್ಷಿತರನ್ನು ಸೃಷ್ಠಿಸಿದ ಕೀರ್ತಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಇದೆ ಎಂದ ಅವರು ತನ್ನನ್ನು ಮಂಡೆಕೋಲಿನಿಂದ ದೆಹಲಿಯ ಸಂಸತ್ತಿಗೆ ಏರಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲುತ್ತದೆ ಎಂದು ಹೇಳಿದರು. ಸೋಲು, ಅವಮಾನ ಸಂಭವಿಸಿದರೆ ಮಾತ್ರ ಅಂಥಹಾ ಸವಾಲನ್ನು ಸ್ವೀಕರಿಸುವ ಶಕ್ತಿ ದೊರೆತು ಮುಂದಿನ ದಾರಿ ತೆರೆದುಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಎಸ್.ಅಂಗಾರ ಮಾತನಾಡಿ ಶಿಕ್ಷಕರ ಸತತ ಪ್ರಯತ್ನ, ಇಚ್ಛಾಶಕ್ತಿಯಿಂದ ಶಿಕ್ಷಣ ಸಂಸ್ಥೆ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ಹೇಳಿದರು.ಸರಕಾರಿ ಪದವಿಪೂರ್ವ ಕಾಲೇಜು ಯಶಸ್ಸಿಗೆ ಮಾದರಿ ಎಂದು ಹೇಳಿದರು.ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಪದ್ಮಶ್ರೀ ಪುರಸ್ಕೃತರಾದ ಗಿರೀಶ್ ಭಾರದ್ವಾಜ್, ವಿಶ್ರಾಂತ ಉಪಕುಲಪತಿ ಡಾ.ಚಿದಾನಂದ ಕೊಳಂಬೆ,ನಿವೃತ್ತ ಐಎಫ್ಎಸ್ ಅಧಿಕಾರಿ ಸುಂದರ ನಾಯ್ಕ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಕೆ.ಸೀತರಾಮ ರೈ ಸವಣೂರು, ಪ್ರಧಾನ ಕಾರ್ಯದರ್ಶಿ ಎಂ.ಬಿ ಸದಾಶಿವ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಂಜುಳಾ ಬಡಿಗೇರ್, ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ ಬೊಮ್ಮೆಟ್ಟಿ, ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ಅಮೃತ ಮಹೋತ್ಸವ ಸಮಿತಿಯ ಉಪಾಧ್ಯಕ್ಷ ಪಿ.ಬಿ.ಸುಧಾಕರ ರೈ, ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ ಉಪಸ್ಥಿತಿತರಿದ್ದರು.
ಪಿ.ಬಿ.ಸುಧಾಕರ ರೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

















