ಸುಳ್ಯ: ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಡಿ.26 ರಂದು ಕೆವಿಜಿ ಕಾನೂನು ಮಹಾವಿದ್ಯಾಲದ ಪರಿಸರದಲ್ಲಿ ನಡೆದ ಆಧುನಿಕ ಸುಳ್ಯದ ಭವ್ಯ ಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ ‘ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ಯಲ್ಲಿ ಸಾಂಸ್ಕೃತಿಕ

ಸಂಭ್ರಮ ಮನಸೆಳೆಯಿತು. ಸಂಜೆ ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಆರಂಭಿಕ ಮನೋರಂಜನಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ
ಜೀವನ್ ಟಿ.ಎನ್.ಬೆಳ್ಳಾರೆ ಸಾರಥ್ಯದ ಡ್ಯಾನ್ಸ್ & ಬೀಟ್ಸ್ ತಂಡದವರಿಂದ ನೃತ್ಯ ಸಂಭ್ರಮ ನಡೆಯಿತು. ನೂರಾರು ಮಂದಿ ಆಗಮಿಸಿ ಸುಳ್ಯ ಹಬ್ಬ ಸಂಭ್ರಮದಲ್ಲಿ ಭಾಗಿಯಾದರು.
ಚಿತ್ರಗಳು:ನವೀನ್, ಸ್ಟುಡಿಯೋ ಗೋಪಾಲ್
