ಸುಳ್ಯ: ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಳಗ್ಗೆ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಮಧ್ಯಾಹ್ನ ಕಾರ್ಯಕ್ರಮ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಿ.ಎಲ್. ಪಾಂಡುರಂಗ, ಎಂ.ಎಸ್ಸಿ. (ಗಣಿತ) ಹಾಗೂ
ವೃತ್ತಿ ಮಾರ್ಗದರ್ಶನ ತಜ್ಞರು ಭಾಗವಹಿಸಿ ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿ ಅವಕಾಶಗಳು, ಉನ್ನತ ಶಿಕ್ಷಣದ ಆಯ್ಕೆಗಳು ಹಾಗೂ ಭವಿಷ್ಯದ ವೃತ್ತಿ ಜೀವನದ ಕುರಿತು ಸಮಗ್ರ ಮಾರ್ಗದರ್ಶನ ನೀಡಿದರು.ಬಳಿಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋಧಾ ರಾಮಚಂದ್ರ, ಉಪಪ್ರಾಂಶುಪಾಲ ದೀಪಕ್ ವೈ.ಆರ್. ಮಾತನಾಡಿದರು.
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಣದ ನಂತರ ಲಭ್ಯವಿರುವ ವಿವಿಧ ಉನ್ನತ ಶಿಕ್ಷಣ ಹಾಗೂ ವೃತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಲಾಯಿತು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ಶಿಕ್ಷಣದ ಮುಂದಿನ ಹಂತಗಳು, ವಿವಿಧ ವೃತ್ತಿಪರ ಕೋರ್ಸ್ಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಮಾರ್ಗದರ್ಶನ ನೀಡಲಾಯಿತು. ಭೌತಶಾಸ್ತ್ರ ಉಪನ್ಯಾಸಕಿ ಭವ್ಯ ಸಿ.ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.










