ಸುಳ್ಯ: ಸಿಬಿಎಸ್ಇ 10ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯದ ಕೆವಿಜಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ
54 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ.
45 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಮತ್ತು 8 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶ್ರದ್ಧಾ ಪೈ 97% ಹಾಗೂ ಮನ್ವಿತಾ 96.6% ಅಂಕಗಳೊಂದಿಗೆ ಶಾಲೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನಿಗಳಾಗಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















