ಸುಳ್ಯ:ಗೌಡರ ಯುವ ಸೇವಾ ಸಂಘದ ನೇತೃತ್ವದಲ್ಲಿ ಸುಳ್ಯದ ಮುಖಂಡರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.ಸುಳ್ಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಸಲ್ಲಿಸಲಾಯಿತು.ಗೌಡ ಸಮುದಾಯ ಭವನದ ಅಭಿವೃದ್ಧಿ, ರಸ್ತೆ ಅಭಿವೃದ್ಧಿ ಸೇರಿ ವಿವಿಧ
ಅಭಿವೃದ್ಧಿ ಕೆಲಸಗಳಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಯಿಯಿತು.ಡಿಕೆಶಿ ನೇತೃತ್ವದ ಸರಕಾರ 100 ದಿನದ ಆಡಳಿತ ಪೂರೈಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅವರನ್ನು ಅಭಿನಂದಿಸಲಾಯಿತು.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ರಾಜ್ಯ

ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ,ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ
ಪಿ.ಎಸ್.ಗಂಗಾಧರ,ಪ್ರಮುಖರಾದ ಧನಂಜಯ ಅಡ್ಪಂಗಾಯ, ನಿತ್ಯಾನಂದ ಮುಂಡೋಡಿ, ಪಿ. ಸಿ. ಜಯರಾಮ,ದಿನೇಶ್ ಮಾಡಪ್ಪಾಡಿ, ದಿನೇಶ್ ಮಡ್ತಿಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ
ಚರ್ಚಿಸಲಾಯಿತು.









