ಸುಳ್ಯ: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕಲ್ಲಪಳ್ಳಿಯಲ್ಲಿ ಮಣ್ಣು ಕುಸಿದು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ನಡೆದಿದೆ. ಮಳೆಗೆ ಸಂಜೆಯ ವೇಳೆಗೆ ಕಲ್ಲಪಳ್ಳಿಯ ಮೂಲೆಹಿತ್ಲು ಸಮೀಪ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ರಸ್ತೆಗೆ
ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಬಳಿಕ ಸಾರ್ವಜನಿಕರು ಸೇರಿ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಪರಪ್ಪ ಬ್ಲಾಕ್ ಪಂಚಾಯತ್ ಸದಸ್ಯ ಅರುಣ್ ರಂಗತ್ತಮಲೆ, ಗ್ರಾಮ ಪಂಚಾಯತ್ ಸದಸ್ಯ ರಾಧಾಕೃಷ್ಣ ಕಲ್ಲಪಳ್ಳಿ ಮತ್ತಿತರರ ನೇತೃತ್ವದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯಿತು.