ಸುಳ್ಯ:ಇತಿಹಾಸ ಮತ್ತು ಪತ್ರಿಕಾ ಮಾಧ್ಯಮಗಳ ಮಹತ್ವ ಯುವ ಜನಾಂಗಕ್ಕೆ ತಿಳಿಸುವ ಅನಿವಾರ್ಯತೆ ಇದೆ. ಆ ಮೂಲಕ ಯುವಜನರನ್ನು ಆಕರ್ಷಿಸುವ ಕೆಲಸ ಆಗಬೇಕಾಗಿದೆ ಎಂದು ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಭಾತ್ ಬಲ್ನಾಡು ಹೇಳಿದ್ದಾರೆ.ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕನ್ನಡ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ
ಅವರು ಉಪನ್ಯಾಸ ನೀಡಿದರು.ಪತ್ರಿಕೆ ಮತ್ತು ಇತಿಹಾಸ ಓದುವುದರಿಂದ ಪರಿವರ್ತನೆ ಸಾಧ್ಯ.ಪತ್ರಕರ್ತರು ನೈಜ ಸಂಗತಿಗಳನ್ನು ದಾಖಲಿಸುವ ಮೂಲಕ ಒಂದು ರೀತಿಯಲ್ಲಿ ಇತಿಹಾಸವನ್ನು ರಚಿಸುತ್ತಿದ್ದಾರೆ.ಈ ಹಿನ್ನಲೆಯಲ್ಲಿ ಪತ್ರಕರ್ತರು ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಅವರು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ್ ಮಾತನಾಡಿ ‘ ವೃತ್ತಿ ಗೌರವವನ್ನು ಉಳಿಸಿಕೊಂಡು ಸಮಾಜವನ್ನು ತಿದ್ದಿ ಮುನ್ನಡೆಸಬೇಕಾದ ಜವಾಬ್ದಾರಿ ಮಾಧ್ಯಮಗಳಿಗೆ ಇದೆ ಎಂದು ಹೇಳಿದರು.ಪತ್ರಿಕಾ ಕ್ಷೇತ್ರದಲ್ಲಿ ನೀಡಿದ

ಸೇವೆಗಾಗಿ ಸಾಹಿತಿ, ಅಂಕಣಕಾರ ಡಾ.ಸುಂದರ ಕೇನಾಜೆ ಅವರನ್ನು ಸನ್ಮಾನಿಸಲಾಯಿತು.ತನ್ನ ಬದುಕಿನುದ್ದಕ್ಕೂ ಪತ್ರಕರ್ತರು ನೀಡಿದ ಬೆಂಬಲ ದೊಡ್ಡದು ಎಂದು ಹೇಳಿದ ಕೇನಾಜೆ ಪತ್ರಿಕಾ ಕ್ಷೇತ್ರ ಇಂದು ಹಲವು ಸವಾಲುಗಳನ್ನು ಎದುರಿಸುತಿದೆ. ಎಲ್ಲಾ ಸವಾಲುಗಳನ್ನು ಎದುರಿಸಿ ಮಾಧ್ಯಮಗಳು ತಮ್ಮ ಪ್ರಭಾವವನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು. ಮುಖ್ಯ ಅತಿಥಿಗಳಾಗಿದ್ದ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದ.ಕ.ಜಿಲ್ಲಾಧ್ಯಕ್ಷ ಪುಷ್ಪರಾಜ್.ಬಿ.ಎನ್ ಮಾತನಾಡಿದರು. ತಾಲೂಕು ಸಂಘದ

ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯ ಗಿರೀಶ್ ಅಡ್ಪಂಗಾಯ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.ತಾಲೂಕು ಸಂಘದ ನಿರ್ದೇಶಕ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಜಯಪ್ರಕಾಶ್ ಕುಕ್ಕೇಟ್ಟಿ ಅಭಿನಂದನಾ ಭಾಷಣ ಮಾಡಿದರು. ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಮಿಥುನ್ ಕರ್ಲಪ್ಪಾಡಿ ವಂದಿಸಿದರು. ಪೂಜಾಶ್ರೀ ವಿತೇಶ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.








