ಸುಳ್ಯ : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಖಮಲೆ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಕುಸಿದ ಮಣ್ಣು ತೆರವು ಮಾಡಲಾಗಿದ್ದು ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.
ಭಾರೀ ಪ್ರಮಾಣದಲ್ಲಿ ಮಣ್ಣು, ಕಲ್ಲು,ಮರಗಳು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿತ್ತು. ಗುಡ್ಡ ಕುಸಿತದಿಂದ ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್ ಆಗಿತ್ತು. ಇದೀಗ ಸಂಚಾರಕ್ಕೆ ಮುಕ್ತವಾಗಿದೆ.