ಸುಳ್ಯ: ಸುಳ್ಯದಲ್ಲಿ ಶುಕ್ರವಾರ ಮಧ್ಯಾಹ್ನದ ಬಳಿಕ ಭಾರೀ ಮಳೆ ಸುರಿಯಿತು. ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯದಿಂದ ಭರ್ಜರಿ ಮಳೆ ಸುರಿಯಿತು. ಕಳೆದ ಕೆಲವು ದಿನಗಳಿಂದ ಸಳ್ಯದಲ್ಲಿ ಸಂಜೆಯ ವೇಳೆಗೆ ಗುಡುಗು, ಸಿಡಿಲಿನ ಮಳೆಯಾಗುತ್ತಿತ್ತು. ಇಂದು ಮಧ್ಯಾಹ್ನದ ವೇಳೆಗೆ ಕತ್ತಲು ಕವಿದು ಮಳೆ ಆರಂಭವಾಯಿತು. ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುಳ್ಯ ನಗರ ಸೇರಿ ತಾಲೂಕಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ







