ಸುಳ್ಯ: ಸುಳ್ಯದಲ್ಲಿ ಭಾನುವಾರ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆ ಸುರಿದಿದೆ. ಗುಡುಗು ಸಿಡಿಲಿನ ಅಬ್ಬರದೊಂದಿಗೆ ಉತ್ತಮ ಮಳೆಯಾಗಿದೆ. ಸುಳ್ಯ ನಗರದಲ್ಲಿ ಸುಮಾರು 40 ನಿಮಿಷಗಳ ಭಾರೀ ಮಳೆ ಸುರಿದಿದ್ದು 40 ನಿಮಿಷಗಳಲ್ಲಿ 70 ಮಿ. ಮೀ. ಮಳೆ ಸುರಿದಿದೆ ಎಂದು ಸುಳ್ಯ ನಗರದಲ್ಲಿ ಮಳೆಯ ದಾಖಲೆ ಮಾಡುವ
ಶ್ರೀಧರ ರಾವ್ ಹೈದಂಗೂರು ಮಾಹಿತಿ ನೀಡಿದ್ದಾರೆ. ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಮಳೆಯಾಗಿದೆ.ಕೆಲವು ದಿನಗಳ ಬಳಿಕ ಭರ್ಜರಿ ಮಳೆ ಸುರಿದಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.