ಸುಳ್ಯ:ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವಿವಿಧ ಭರ್ಜರಿ ಮಳೆಯಾಗಿದೆ. ಎ.14ರಂದು ಸಂಜೆಯ ವೇಳೆಗೆ ಮಳೆಯಾಗಿದ್ದು ಸುಳ್ಯ ನಗರ ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಗುಡುಗು ಸಿಡಿಲು, ಗಾಳಿಯ ಅಬ್ಬರದೊಂದಿಗೆ
ಸಾಧಾರಣ ಮಳೆ ಸುರಿದಿದೆ. ಕೆಲವೆಡೆ ಸಾಮಾನ್ಯ ಮಳೆಯಾದರೆ ಕೆಲವೆಡೆ ಭರ್ಜರಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಎಲ್ಲೆಡೆ ಕತ್ತಲು ಕವಿದ ವಾತಾವರಣ ಇದ್ದು ಉತ್ತಮ ಮಳೆ ಸುರಿದಿದೆ. ಕೆಲ ಭಾಗಗಳಲ್ಲಿ ಉತ್ತಮ ಮಳೆ ಸುರಿದ ಬಗ್ಗೆ ಮಾಹಿತಿಯಿದೆ.
ಎಲ್ಲೆಡೆ ಗುಡುಗು, ಸಿಡಿಲು ಹಾಗೂ ಭಾರೀ ಗಾಳಿಯ ಅಬ್ಬರವೂ ಜೋರಾಗಿತ್ತು. ಗಾಳಿಗೆ ಕೆಲವೆಡೆ ಮರ ಬಿದ್ದು, ರಸ್ತೆ ತಡೆ ಉಂಟಾಗಿದೆ, ವಿದ್ಯುತ್ ಕಂಬಗಳಿಗೆ ಹಾನಿ ಸಂಭವಿಸಿದೆ. ಗಡಿ ಗ್ರಾಮಗಳಲ್ಲಿಯೂ ಭಾರೀ ಮಳೆಯಾಗಿದೆ. ಗಾಳಿ ಮಳೆಯ ಅಬ್ಬರ ಬಿರುಸಾಗಿತ್ತು.