ಸುಳ್ಯ: ಗುರುವಾರ ರಾತ್ರಿ ಸುಳ್ಯದಲ್ಲಿ ಭರ್ಜರಿ ಮಳೆ ಸುರಿದಿದ್ದು 78 ಮಿ.ಮಿ.ಮಳೆಯಾಗಿದೆ ಎಂದು ಸುಳ್ಯದಲ್ಲಿ ಮಳೆ ದಾಖಲೆ ಮಾಡುವ ಶ್ರೀಧರ ರಾವ್ ಹೈದಂಗೂರು ತಿಳಿಸಿದ್ದಾರೆ.
ಸುಳ್ಯದಲ್ಲಿ ರಾತ್ರಿ ಸುಮಾರು ಎರಡೂವರೆ ಗಂಟೆಗಳ ಕಾಲ ಭರ್ಜರಿ ಮಳೆ ಸುರಿಯಿತು. ಗುಡುಗು ಮಿಂಚಿನ ಅಬ್ಬರದೊಂದಿಗೆ ಭಾರೀ ಮಳೆಯಾಗಿದೆ. ರಾತ್ರಿ 8.30ರ ವೇಳೆಗೆ ಆರಂಭವಾದ ಮಳೆ ರಾತ್ರಿ 11 ಗಂಟೆಯ ತನಕ ಮುಂದುವರಿದಿತ್ತು.









