ಸುಳ್ಯ:ಸುಳ್ಯದಲ್ಲಿ ಮೇ.13ರಂದು ಉತ್ತಮ ಮಳೆಯಾಗಿದೆ. ಗುಡುಗು ಸಿಡಿಲಿನ ಅಬ್ಬರದೊಂದಿಗೆ ಉತ್ತಮ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇತ್ತು ಸಂಜೆ 4 ಗಂಟೆಯ ಬಳಿಕ ಮಳೆ ಆರಂಭಗೊಂಡಿತ್ತು. ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆಯಾಗಿದ್ದು. ಬಳಿಕ
ವಿರಾಮ ನೀಡಿದ ಮಳೆ ರಾತ್ರಿಯ ವೇಳೆ ಮತ್ತೆ ಸುರಿದಿದೆ. ಗುಡುಗು ಸಿಡಿಲಿನ ಅಬ್ಬರದೊಂದಿಗೆ ಉತ್ತಮ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಸುಳ್ಯದಲ್ಲಿ ಮಳೆ ವಿರಾಮ ನೀಡಿತ್ತು. ಮೋಡ ಕವಿದ ವಾತಾವರಣ ಇದ್ದರೂ ಮಳೆಯಾಗಿರಲಿಲ್ಲ. ಬಿಸಿಲ ಝಳಕ್ಕೆ ಏರಿದ ಸೆಕೆಯಿಂದ ಬೆಂದಿದ್ದ ನಗರಕ್ಕೆ ತಂಪೆರೆದು ಮತ್ತೆ ಉತ್ತಮ ಮಳೆಯಾಗಿದೆ. ಸುಳ್ಯ ತಾಲೂಕಿನ ಹಾಗು ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಸುಬ್ರಹ್ಮಣ್ಯ ಮತ್ತಿತರ ಕಡೆಗಳಲ್ಲಿ ಸೋಮವಾರವೂ ಉತ್ತಮ ಮಳೆಯಾಗಿತ್ತು.
ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.