ಸುಳ್ಯ: ಸುಳ್ಯದಲ್ಲಿ ಮಂಗಳವಾರ ಭರ್ಜರಿ ಮಳೆ ಸುರಿದಿದೆ. ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ಸಂಜೆ 4.30ರ ಬಳಿಕ ಮಳೆ ಆರಂಭಗೊಂಡಿದೆ.ಸುಳ್ಯ ನಗರದಲ್ಲಿ ಉತ್ತಮ ಮಳೆಯಾಗಿದ್ದು ತಾಲೂಕಿನ ವಿವಿಧೆಡೆ ಧಾರಕಾರ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.ಮಳೆಗೆ
ರಸ್ತೆಯಲ್ಲಿ, ಚರಂಡಿಗಳಲ್ಲಿ ಮಳೆ ನೀರು ಉಕ್ಕಿ ಹರಿದಿದೆ. ಸೋಮವಾರ ರಾತ್ರಿಯೂ ಮಳೆ ಸುರಿದಿತ್ತು.ವಿವಿಧ ಕಡೆ ಹನಿ ಮಳೆ, ಸಾಧಾರಣ ಮಳೆಯಾಗಿತ್ತು.ಕಳೆದ ಕೆಲವು ದಿನಗಳಿಂದ ಭಾರೀ ಅಕಾಲಿಕ ಮಳೆಯಾಗುತಿದೆ.ಎರಡು ದಿನ ಮಳೆ ಮುಂದುವರಿಯುವ ಸೂಚನೆ ಇದೆ. ರಾಜ್ಯಾದ್ಯಂತ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶ್ರೀಲಂಕಾ ಕರಾವಳಿಯಿಂದ ತಮಿಳುನಾಡಿನ ಉತ್ತರ ಕರಾವಳಿ ಉದ್ದಕ್ಕೂ ಇರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ವಿಜಯನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಿದೆ.





