ಸುಳ್ಯ: ಸುಳ್ಯದಲ್ಲಿ ಇಂದು ಧಾರಾಕಾರ ಮಳೆ ಸುರಿದಿದ್ದು ವರುಣ ಭರ್ಜರಿ ಬ್ಯಾಟಿಂಗ್ ನಡೆಸಿ ದ್ವಿಶತಕ ಸಿಡಿಸಿದ್ದಾನೆ.ಸುಳ್ಯ ನಗರದಲ್ಲಿ ಶನಿವಾರ ಬೆಳಿಗ್ಗೆ ಎಂಟು ಗಂಟೆಯಿಂದ ರಾತ್ರಿ 10 ಗಂಟೆಯ ತನಕ 202 ಮಿ.ಮಿ. (20 ಸೆಂ.ಮಿ.)ಮಳೆಯಾಗಿದೆ ಎಂದು ಸುಳ್ಯ ನಗರದಲ್ಲಿ ಮಳೆ ಮಾಪಕ ಇರಿಸಿ ಪ್ರತಿ ದಿನ ಮಳೆ ದಾಖಲೆ ಮಾಡುವ ಶ್ರೀಧರ ರಾವ್ ಹೈದಂಗೂರು ತಿಳಿಸಿದ್ದಾರೆ.ಸುಳ್ಯದಲ್ಲಿ ಶನಿವಾರ ದಿನಪೂರ್ತಿ ಧಾರಾಕಾರ ಮಳೆ ಸುರಿದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












