ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು.ಸುಳ್ಯ ತಹಶೀಲ್ದಾರ್ ಮಂಜುನಾಥ್ ಎಂ ಧ್ವಜಾರೋಹಣಗೈದು, ಪಥ ಸಂಚಲನ ಗೌರವ ವಂದನೆ ಸ್ವೀಕರಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು,ಸುಳ್ಯ ನಗರ

ಪಂಚಾಯತ್ ಸದಸ್ಯರುಗಳಾದ ವಿನಯ ಕುಮಾರ್ ಕಂದಡ್ಕ, ಎಂ.ವೆಂಕಪ್ಪ ಗೌಡ, ಬುದ್ದನಾಯ್ಕ, ಬಾಲಕೃಷ್ಣ ಭಟ್ ಕೊಡೆಂಕಿರಿ, ಸುಧಾಕರ ಕುರುಂಜಿಭಾಗ್, ಶಶಿಕಲಾ ನೀರಬಿದಿರೆ, ಪೂಜಿತಾ ಕೆ.ಯು., ಸುಶೀಲ ಜಿನ್ನಪ್ಪ, ಡೇವಿಡ್ ಧೀರ ಕ್ರಾಸ್ತ, ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಹೆಚ್. ಭಾಗವಹಿಸಿದ್ದರು ಸಾಹಿತಿಗಳಾದ ವೆಂಕಟ್ರಾಮ್ ಭಟ್ ಹಾಗೂ ಲೀಲಾ ದಾಮೋದರ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ. ಯಲ್ಲಿ ಕನ್ನಡ ವಿಷಯದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಈ.ರಮೇಶ್ ಸ್ವಾಗತಿಸಿ, ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ. ವಂದಿಸಿದರು.ಶಿಕ್ಷಣ ಸಂಯೋಜಕಿ ಸಂಧ್ಯಾಕುಮಾರಿ, ಸಿ.ಆರ್.ಪಿ. ಮಮತಾ ಸನ್ಮಾನಿತರನ್ನು ಪರಿಚಯಿಸಿದರು. ಶಿಕ್ಷಣ ಸಂಯೋಜಕಿ ನಳಿನಿ ಕನ್ನಡ ಮಾಧ್ಯಮ ದಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು.
ಶಿಕ್ಷಕಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು.









