ಸುಳ್ಯ:ನಗರೋತ್ಥಾನ ಯೋಜನೆಯಡಿ ಸುಳ್ಯ ನಗರದ ವರ್ತುಲ ರಸ್ತೆಗಳ ಅಭಿವೃದ್ಧಿಗೆ 5 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರಿಗೆ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ ಮನವಿ ಮಾಡಿದ್ದಾರೆ.ಇಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ
ಭೇಟಿ ಮಾಡಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಬಿಗಡಾಯಿಸಲಿದೆ.ಇದಕ್ಕೆ ಪರಿಹಾರವಾಗಿ ರಾಜ್ಯ ಹೆದ್ದಾರಿಗಳನ್ನು, ಜಿಲ್ಲಾ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಮತ್ತು ನಗರ ವ್ಯಾಪ್ತಿಯಲ್ಲಿರುವ ಒಳರಸ್ತೆಗಳನ್ನು ರಿಂಗ್(ವರ್ತುಲ) ರಸ್ತೆಗಳನ್ನಾಗಿ ಅಭಿವೃದ್ಧಿ ಪಡಿಸಬೇಕಾದ ಅವಶ್ಯಕತೆ ಇದೆ. ಈ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ನಗರೋತ್ಥಾನ ಯೋಜನೆಯಡಿ ರೂ.5 ಕೋಟಿ ವಿಶೇಷ ಅನುದಾನ ಬಿಡುಗಡೆ ಗೊಳಿಸುವಂತೆ ಸಚಿವರಿಗೆ ಕೆ. ಎಂ
ಮುಸ್ತಫ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ಸಂಶುದ್ದೀನ್, ಎಂ.ವೆಂಕಪ್ಪ ಗೌಡ, ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ,ರಾಜು ಪಂಡಿತ್ ಮೊದಲಾದವರು ಉಪಸ್ಥಿತರಿದ್ದರು.








