ಸುಳ್ಯ:ಸುಳ್ಯ ಪೊಲೀಸ್ ಠಾಣೆಯ ಎಸ್ಐ ಆಗಿ ಉದಯರವಿ ವೈ.ಎಂ.ಅವರು ಅಧಿಕಾರ ಸ್ವೀಕರಿಸಿದ್ದಾರೆ.ಸುಳ್ಯ ಎಸ್ಐ ಸಂತೋಷ್ ಕುಮಾರ್.ಬಿ.ಪಿ.ಅವರು ಉದಯರವಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.ದಕ್ಷಿಣ ಕನ್ನಡ ಸೈಬರ್ ಕ್ರೈಂ ಠಾಣೆಯ ಎಸ್ಐ ಆಗಿದ್ದ
ಉದಯರವಿ ಅವರಿಗೆ ಸುಳ್ಯ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆಯ ಎಸ್ಐ ಆಗಿ ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು.
ಶುಕ್ರವಾರ ಸಂಜೆ ಅವರು ಅಧಿಕಾರ ಸ್ವೀಕರಿಸಿದರು. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ಬಿ.ಪಿ.ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ.









