ಸುಳ್ಯ: ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆ ಸುರಿದಿದೆ. ಸಂಪಾಜೆ, ಕೊಲ್ಲಮೊಗ್ರ ಭಾಗದಲ್ಲಿ ಭರ್ಜರಿ ಮಳೆಯಾಗಿದೆ. ಬಳ್ಪ, ಕೇನ್ಯ ಎಣ್ಮೂರು, ವಾಲ್ತಾಜೆ ಸೇರಿದಂತೆ ವಿವಿಧ ಕಡೆಗಳಲ್ಲಿ ಭಾರೀ ಮಳೆಯಾಗಿದೆ.ಪಂಜ ಪರಿಸರದಲ್ಲಿ ಭಾರೀ ಮಳೆಯಾಗಿದ್ದು
ಪಂಜ ಹೊಳೆ ತುಂಬಿ ಹರಿಯುತ್ತಿದ್ದು ಪಂಜ -ಸುಬ್ರಹ್ಮಣ್ಯ ರಸ್ತೆಯಲ್ಲಿ ಪಂಜ ಹೊಳೆ ನೀರು ಉಕ್ಕಿ ಹರಿದು ರಸ್ತೆ ಮೇಲೆ ನೆರೆ ನೀರು ಉಕ್ಕಿ ಹರಿದಿದೆ. ಈ ಭಾಗದಲ್ಲಿ ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಮಳೆಯಾಗಿದೆ. ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆಯಾಗಿದೆ. ಕೆಲವೆಡೆ ಎರಡು ಗಂಟೆಗೂ ಹೆಚ್ಚು ಮಳೆಯಾಗಿದೆ. ಕೊಲ್ಲಮೊಗ್ರ, ಪಂಜ ಸೇರಿ ಹಲವೆಡೆ ರಸ್ತೆಯ ಮೇಲೆ ನೀರು ಹರಿದು ಸಂಚಾರಕ್ಕೆ ತಡೆ ಉಂಟಾದ ಘಟನೆ ನಡೆದಿತ್ತು.