ಸುಳ್ಯ:ಮಲೆನಾಡು ಪ್ರದೇಶವಾದ ಸುಳ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶ ಇದೆ. ಈ ಹಿನ್ನಲೆಯಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳ ಜೊತೆ ಅವರು ಚರ್ಚೆ ನಡೆಸಿದರು. ಪರಿಸರದ ಮಹತ್ವವನ್ನು ಸಾರುವ ಹಿನ್ನಲೆಯ
ಉದ್ಯಾನವನಗಳು, ಅಮ್ಯೂಸ್ಮೆಂಟ್, ಪಾರ್ಕ್ಗಳು, ಬೋಟಿಂಗ್ ಮತ್ತಿತರ ವ್ಯವಸ್ಥೆಗಳನ್ನು ನಿರ್ಮಿಸಿ ಜನರಿಗೆ ಸಮಯವನ್ನು ಕಳೆಯುವ ಸ್ಥಳಗಳ ಅವಕಾಶ ಮಾಡಬಹುದು. ಜೊತೆಗೆ ನಗರ ಪಂಚಾಯತ್ಗೆ ಆದಾಯವೂ ಗಳಿಸಬಹುದು. ಅಲ್ಲದೆ ಸುಳ್ಯದಲ್ಲಿ ಅಲ್ಲಲ್ಲಿ ಟೂರಿಸಂ ಸ್ಪಾಟ್ಗಳನ್ನು ರೂಪಿಸಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬಹುದು ಎಂದು ಹೇಳಿದರು. ಈ ಹಿನ್ನಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಸ್ಥಳಗಳನ್ನು ಹುಡುಕುವಂತೆ ಅವರು ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು. ಈ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಹಾಗೂ ಏಜೆನ್ಸಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದು ಸಹಾಯಕ ಕಮೀಷನರ್ ಹೇಳಿದರು.
ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ್, ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಠ್, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಸದಸ್ಯರಾದ ವಿನಯಕುಮಾರ್ ಕಂದಡ್ಕ, ಕೆ.ಎಸ್.ಉಮ್ಮರ್, ಶರೀಫ್ ಕಂಠಿ, ಧೀರಾ ಕ್ರಾಸ್ತಾ, ಸುಧಾಕರ, ಶಿಲ್ಪಾ ಸುದೇವ್, ಶೀಲಾ ಅರುಣ ಕುರುಂಜಿ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಿದರು.