ಸುಳ್ಯ: ಸುಳ್ಯ ತಹಶೀಲ್ದಾರ್ ಆಗಿ ಜಿ.ಮಂಜುನಾಥ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿಗಳ ಕಛೇರಿಯ ಜಾರಿದಳ ವಿಭಾಗದಲ್ಲಿ ತಹಶೀಲ್ದಾರ್ ಆಗಿದ್ದ ಮಂಜುನಾಥ ಅವರನ್ನು ಖಾಲಿ ಇರುವ ಸುಳ್ಯ ತಾಲೂಕು ಗ್ರೇಡ್ 1 ತಹಶೀಲ್ದಾರ್ ಹುದ್ದೆಗೆ ನೇಮಕ ಮಾಡಿ ಸರಕಾರ ಆದೇಶಿಸಿದೆ. ಸುಳ್ಯ ತಹಶೀಲ್ದಾರ್ ಆಗಿದ್ದ ಅನಿತಾಲಕ್ಷ್ಮಿ ಅವರು ವರ್ಗಾವಣೆ ಆದ ಹಿನ್ನಲೆಯಲ್ಲಿ ಸುಳ್ಯ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.