ಸುಳ್ಯ: ಸುಳ್ಯ ನಗರದಲ್ಲಿ ಕೆಲವೆಡೆ ಮಧ್ಯಾಹ್ನದ ವೇಳೆಗೆ ಹನಿ ಮಳೆ ಸುರಿದಿದೆ. ಬೆಳಿಗ್ಗಿನಿಂದ ಮೋಡ ಕವಿದ ವಾತಾವರಣ ಇದ್ದು ಮಧ್ಯಾಹ್ನ 2 ಗಂಟೆಯ ವೇಳೆಗೆ ಹನಿ ಮಳೆಯಾಗಿದೆ.ಮೋಡದ ವಾತಾವರಣ ಮುಂದುವರಿದಿದ್ದು ಮಳೆ ಸುರಿಯುವ ಸಾಧ್ಯತೆ ಇದೆ.ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ
ಒಂದೆರಡು ದಿನ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಕಡೆಗಳಲ್ಲಿ ಶನಿವಾರ ಮಳೆಯಾಗಿತ್ತು.ಭಾನುವಾರವೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ಇತ್ತು.ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತಿದೆ. ಸುಬ್ರಹ್ಮಣ್ಯ, ಕೊಡಗಿನ ಕೆಲವು ಭಾಗಗಳಲ್ಲಿ ಮಳೆಯಾಗಿತ್ತು. ಆದರೆ ಸುಳ್ಯ ನಗರದಲ್ಲಿ ಮಳೆ ಸುರಿದಿರಲಿಲ್ಲ ಮತ್ತು ಸೆಕೆಯ ವಾತಾವರಣ ಮುಂದುವರಿದಿತ್ತು.ಭಾನುವಾರ ದಿನ ಪೂರ್ತಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು ಮಳೆ ಸುರಿಯುವ ಸಾಧ್ಯತೆ ಇದೆ.