ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಅವರು ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಅವರು
ಹೇಳಿದ್ದಾರೆ. ಹಲವು ಮುಖಂಡರು ಈ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾದರು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್, ಮಾಜಿ ಸಚಿವ ಮುನಿರತ್ನ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ನಾರಾಯಣಗೌಡ, ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಇಂದ್ರೇಶ್ಕುಮಾರ್, ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ್, ಪಕ್ಷದ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.