ತಿರುವನಂತಪುರಂ: ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ,ಚಲನಚಿತ್ರ ತಾರೆ ಹಾಗೂ ರಾಜ್ಯಸಭಾ ಮಾಜಿ ಸದಸ್ಯ ಸುರೇಶ್ ಗೋಪಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸುರೇಶ್ ಗೋಪಿ 30 ಸಾವಿರ ಮತಗಳ
ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ತಿರುವನಂತಪುರಂ ಕ್ಷೇತ್ರದಲ್ಲಿ ಬಿಜೆಪಿ ಸಚಿವ ರಾಜೀವ್ ಚಂದ್ರಶೇಖರ 5 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಸರಗೋಡು ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ರಾಜ್ಮೋಹನ್ ಉಣ್ಣಿತ್ತಾನ್ ಮುನ್ನಡೆ ಸಾಧಿಸಿದ್ದಾರೆ. ಈ ಮಧ್ಯೆ ತಮಿಳುನಾಡಿನ ಕೋಯಂಬತ್ತೂರು ಕ್ಷೇತ್ರದಲ್ಲಿ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹಿನ್ನಡೆಯಲ್ಲಿದ್ದಾರೆ.









