ತಿರುವನಂತಪುರಂ: ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಕೇರಳದಲ್ಲಿ ಎನ್ಡಿಎ ಖಾತೆ ತೆರೆದ ಸುರೇಶ್ ಗೋಪಿ ಅವರು ಕೇಂದ್ರ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಕೇಂದ್ರ ಸಚಿವರಾಗಲು ಕೇಂದ್ರ ನೇತೃತ್ವ ಸುರೇಶ್ ಗೋಪಿ ಅವರಿಗೆ
ಸೂಚನೆ ನೀಡಿದೆ ಎಂದು ಹೇಳಲಾಗುತಿದೆ. ಜೂ.9 ರಂದು ಸಂಜೆ 7.15ಕ್ಕೆ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸುರೇಶ್ ಗೋಪಿ ಅವರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಹಿಂದೆ ರಾಜ್ಯ ಸಭಾ ಸದಸ್ಯರಾಗಿದ್ದ ಸುರೇಶ್ ಗೋಪಿ ಇದೀಗ ಸಂಸದರಾಗಿ ಆಯ್ಕೆಯಾಗಿದ್ದು ಕೇಂದ್ರ ಸಚಿವರಾಗಲಿದ್ದಾರೆ ಎಂದು ಹೇಳಲಾಗಿದೆ.