ತಿರುವನಂತಪುರಂ: ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ,ಚಲನಚಿತ್ರ ತಾರೆ ಹಾಗೂ ರಾಜ್ಯಸಭಾ ಮಾಜಿ ಸದಸ್ಯ ಸುರೇಶ್ ಗೋಪಿ ಗೆಲುವು ಖಚಿತಪಡಿಸಿಕೊಂಡಿದ್ದಾರೆ. ಆ ಮೂಲಕ
ಕೇರಳದಲ್ಲಿ ಬಿಜೆಪಿ ಎಕೌಂಟ್ ಓಪನ್ ಮಾಡಿದೆ.
ಸುರೇಶ್ ಗೋಪಿ 64 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಗೆಲುವು ಖಾತ್ರಿ ಪಡಿಸಿದ್ದಾರೆ. ತಿರುವನಂತಪುರಂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ರಾಜೀವ್ ಚಂದ್ರಶೇಖರ ಮುನ್ನಡೆ ಕಾಯ್ದುಕೊಂಡಿದ್ದಾರೆ.