ನವದೆಹಲಿ: ಬಿಜೆಪಿ ಹಿರಿಯ ನಾಯಕ, ಬಿಹಾರ ಮಾಜಿ ಉಪಮುಖ್ಯಮಂತ್ರಿ, ರಾಜ್ಯಸಭಾ ಸಂಸದ ಸುಶೀಲ್ ಮೋದಿ ಇಂದು ನಿಧನರಾಗಿದ್ದಾರೆ. ಇಂದು ಸಂಜೆ ಆಸ್ಪತ್ರೆಯಲ್ಲಿ ಸುಶೀಲ್ ಮೋದಿ ನಿಧನರಾಗಿದ್ದರೆ. 72 ವರ್ಷ ವಯಸ್ಸಾಗಿತ್ತು. ಕಳೆದ 7 ತಿಂಗಳನಿಂದ
ಸುಶೀಲ್ ಮೋದಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಕಾರಣದಿಂದ ಲೋಕಸಭಾ ಚುನಾವಣೆ ಸ್ಪರ್ಧೆಯಿಂದಲೂ ದೂರ ಉಳಿದಿದ್ದರು. ಹಿಂದಿನ ಬಿಹಾರದಲ್ಲಿ ಬಿಜೆಪಿ ಹಾಗೂ ನೀತೀಶ್ ಕುಮಾರ್ ಅವರ ಜೆಡಿಯು ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದರು. ಮೈತ್ರಿ ಸರ್ಕಾರ ಪತನದ ಬಳಿಕ ಸುಶೀಲ್ ಕುಮಾರ್ ಮೋದಿಯನ್ನು ಬಿಜೆಪಿ ರಾಜ್ಯಸಭಾ ಸಂಸದರಾಗಿ ಮುಂದುವರಿದಿದ್ದರು.