ಸುಳ್ಯ:ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ‘ಸಸ್ಟೇನಬಲ್ ಶಿಪ್ಪಿಂಗ್ ದಿನದ’ ಅಂಗವಾಗಿ ಸುಳ್ಯ ತಾಲೂಕಿನ ಅಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ ಸದಸ್ಯರಿಗೆ ಮರುಬಳಕೆ ಮಾಡಬಹುದಾದ ಸ್ಟೈನ್ಲೆಸ್ ಸ್ಟೀಲ್ ನೀರಿನ ಬಾಟಲಿಗಳನ್ನು
ಸುಳ್ಯದ ಅಂಬ್ಯುಲೆನ್ಸ್ ನಿಲ್ದಾಣದಲ್ಲಿ ವಿತರಿಸಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೊಂಟಡ್ಕ ಸ್ಟೀಲ್ ಬಾಟಲಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಅಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ ಸಿದ್ಧಿಕ್, ಸುಳ್ಯ ತಾಲೂಕು ಅಂಬ್ಯುಲೆನ್ಸ್ ಚಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಚಾಲಕರು, ಹಾಗೂ ಜೇಸಿಐ ಸುಳ್ಯ ಪಯಸ್ವಿನಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.









