ಮಂಗಳೂರು: ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 24 ಮತ್ತು 25ರಂದು ಮಂಗಳೂರಿನಲ್ಲಿ ನಡೆಯಲಿರುವ ಸುವರ್ಣ ಕರ್ನಾಟಕ ‘ಬಹುಸಂಸ್ಕೃತಿ ಉತ್ಸವ’ದ ಪೂರ್ವಭಾವಿ ಸಭೆ
ಮಂಗಳೂರಿನ ತುಳು ಭವನದಲ್ಲಿ ನಡೆಯಿತು.ಎಲ್ಲ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರು, ರಿಜಿಸ್ಟ್ರಾರ್’ಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಸೇರಿದಂತೆ ವಿವಿಧ ಅಕಾಡೆಮಿಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.