ಸುಳ್ಯ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ಅಂಗವಾಗಿ ಆಯೋಜಿಸುತ್ತಿರುವ ‘ ಸುವರ್ಣ ಸಂಭ್ರಮ-50’ ಕಾರ್ಯಕ್ರಮದ ಸಮಾರೋಪ ಸಂಭ್ರಮ ಕಾರ್ಯಕ್ರಮದ ಆಯೋಜನೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ
ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಗೃಹ ಸಚಿವ ಜಿ.ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ತುಳು ಅಕಾಡೆಮಿ ಅಧ್ಯಕ್ಷ ತಾರನಾಥ ಕಾಪಿಕಾಡ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು.ಎಚ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನಿ ಆಲ್ವರೀಸ್, ಕೊಡವ ಅಕಾಡೆಮಿ ಅಧ್ಯಕ್ಷ ಮಹೇಶ್ ನಾಚಯ್ಯ, ಯಕ್ಷಗಾನ ಅಕಾಡೆಮಿ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.