ಜಾಲ್ಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು,
ತಾಲೂಕು ಪಂಚಾಯತ್ ಸುಳ್ಯ, ಜಾಲ್ಸೂರು ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಜಾಲ್ಸೂರು ಗ್ರಾ.ಪಂ.ನ ಸ್ವಚ್ಛ ಭಾರತ್ ಮಿಷನ್ ಸ್ವಚ್ಛ ಸಂಕೀರ್ಣ ಲೋಕಾರ್ಪಣೆ ಹಾಗೂ

ಉದ್ಯಾನವನ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಯಿತು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಉದ್ಘಾಟಿಸಿದರು. ಗ್ರಾ.ಪಂ. ಅಧ್ಯಕ್ಷ ಬಾಬು ಕೆ.ಎಂ. ಉಪಾಧ್ಯಕ್ಷೆ ಲೀಲಾವತಿ, ಸುಳ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಸುಂದರಯ್ಯ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೆ.ಪಿ.ಸುಬ್ಬಯ್ಯ ಸೇರಿದಂತೆ ಗ್ರಾಮಸ್ಥರು ಫಲಾನುಭವಿಗಳು ಉಪಸ್ಥಿತರಿದ್ದರು.