ಸುಳ್ಯ:ಗಾಂಧಿ ಜಯಂತಿ ಪ್ರಯುಕ್ತ ಬೃಹತ್ ಸ್ವಚ್ಛತಾ ಆಂದೋಲನ ಸುಳ್ಯ ನಗರದಲ್ಲಿ ನಡೆಯಿತು. ನಗರ ಪಂಚಾಯತ್ ಸುಳ್ಯ, ಅಮರ ಸುಳ್ಯ ರಮಣೀಯ ತಂಡ ನೇತೃತ್ವದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಕೆವಿಜಿ ಶಿಕ್ಷಣ ಸಂಸ್ಥೆಗಳ
ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಗಳು, ವರ್ತಕರು, ಸಾರ್ವಜನಿಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಗರದ ವಿವಿಧ ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ನಗರದ ವಿವಿಧ ಭಾಗಗಳಲ್ಲಿ ಆಯಾ ಪ್ರದೇಶದಲ್ಲಿ ಶಾಲೆ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಕೈ ಜೋಡಿಸಿದರು.ಬೆಳಿಗ್ಗೆ ಎಂಟು ಗಂಟೆಗೆ ಆರಂಭಗೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.