ಸುಳ್ಯ: ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಸ್ವ ರಕ್ಷಣಾ ತರಬೇತಿ ಕಾರ್ಯಕ್ರಮವು ನಡೆಯಿತು. ಸ್ವರಕ್ಷಾ ಫಾರ್ ವುಮೆನ್ ಟ್ರಸ್ಟ್ನ ಸಂಸ್ಥಾಪಕರಾದ ಸ್ವ ರಕ್ಷಣಾ ತರಬೇತುದಾರ ಕಾರ್ತಿಕ್ ಎಸ್ ಕಟೀಲ್ ತರಬೇತಿ ನೀಡಿದರು. ಸಹ ತರಬೇತುದಾರರಾಗಿ
ನೃತ್ಯಪಟು ಶೋಬಲತಾ ಸುರೇಶ್ ರವರು ಸಹಕರಿಸಿದರು. ರೆಡ್ ಕ್ರಾಸ್ ಸಂಸ್ಥೆಯ ಸ್ಥಾಪನೆ ಮತ್ತು ಇದರ ಕಾರ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯಗಳ ವಿರುದ್ಧ ಸ್ವ ರಕ್ಷಣೆಯನ್ನು ಮಾಡುವುದರ ಬಗ್ಗೆ ಪ್ರಾತ್ಯಕ್ಷತೆಯನ್ನು ತೋರಿಸಿ ವಿದ್ಯಾರ್ಥಿಗಳಲ್ಲಿ ಧೈರ್ಯವನ್ನು ತುಂಬಿದರು. ಪ್ರತಿಯೊಬ್ಬ ವಿದ್ಯಾರ್ಥಿನಿಯರು ಈ ಸ್ವ ರಕ್ಷಣಾ ಕಲೆಯನ್ನು ಕರಗತ ಮಾಡಬೇಕೆಂದು ತಿಳಿಸಿದರು ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ .ಕೆ ಸ್ವಾಗತಿಸಿ ಉಪನ್ಯಾಸಕಿ ಸ್ವರ್ಣಕಲಾ.ಎ.ಎಸ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಉಪನ್ಯಾಸಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.