ಸುಳ್ಯ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ
ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯು ಕೊಡಿಯಾಲಬೈಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಸುಳ್ಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಟಿ.ದಮಯಂತಿ ಸೋಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ಹಿರಿಯ ವಕೀಲರಾದ ದಳ ಸುಬ್ರಾಯ ಭಟ್ ಅವರು ಮಾನವ ಕಳ್ಳ ಸಾಗಾಣಿಕೆ ಎಂಬ ವಿಚಾರದಲ್ಲಿ ಉಪನ್ಯಾಸ ನೀಡಿದರು.
ಎಪಿಪಿ ಪ್ರೀತಿ ಎಂ.ಸಿ, ಸುಳ್ಯ ಎಸ್ಐ ಸಂತೋಷ್.ಬಿ.ಪಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಎಂ.ವೆಂಕಪ್ಪ ಗೌಡ,
ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ಸುಳ್ಯ ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘದ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜನಜಾಗೃತಿ ವೇದಿಕೆಯ ನಿಕಟ ಪೂರ್ವಾಧ್ಯಕ್ಷ ಲೋಕನಾಥ್ ಅಮೆಚೂರ್, ಸುಳ್ಯ ವಕಯದ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ, ಒಕ್ಕೂಟದ ವಲಯಾಧ್ಯಕ್ಷ ಮನೋಹರ್ ಉಪಸ್ಥಿತರಿದ್ದರು.
ಉಪನ್ಯಾಸಕರಾದ ಕಿಶೋರ್ ಸ್ವಾಗತಿಸಿದರು. ಯೋಜನಾಧಿಕಾರಿ ಮಾಧವ ಗೌಡ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್ ಸಂಯೋಜಕಿ ಮೋನಿಕಾ ವಂದಿಸಿದರು.ವಲಯ ಮೇಲ್ವಿಚಾರಕ ದಿನೇಶ್ ಕಾರ್ಯಕ್ರಮ ನಿರೂಪಿಸಿದರು. ಪ್ರತೀಕ್ಷಾ ಮತ್ತು ತಂಡದವರು ಪ್ರಾರ್ಥನೆ ಹಾಡಿದರು.









