ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್,ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಜ್ಜಾವರ ವಲಯ ಹಾಗೂ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯದ ಶ್ರೀ ಶಾರದ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು ಶಾಲಾ
ಮುಖ್ಯ ಶಿಕ್ಷಕಿ ಭಾರತಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕಿನ ಕೇಂದ್ರ ಒಕ್ಕೂಟ ಸಮಿತಿಯ ಅಧ್ಯಕ್ಷರು, ಜನಜಾಗೃತಿ ವಲಯ ಅಧ್ಯಕ್ಷ ಸುರೇಶ್ ಕಣೆ ಮರಡ್ಕ ಕಾರ್ಯಕ್ರಮ ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವಲಯ ತರಬೇತುದಾರಾದ ಡಾ. ಅನುರಾಧಾ ಕುರುಂಜಿ ಭಾಗವಹಿಸಿದ್ದರು. ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿ, ದುಶ್ಚಟಗಳಿಗೆ ಬಲಿಯಾಗದಂತೆ ಜಾಗೃತರಾಗಬೇಕು. ಆ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ನಾವೆಲ್ಲರೂ ಕೈಜೋಡಿಸಬೇಕು ಎಂದರು.
ಜನಜಾಗೃತಿ ಸದಸ್ಯ ಸುಬ್ಬ ಪಾಟಾಳಿ, ಜನಜಾಗೃತಿ ಸದಸ್ಯರು, ಕಾಂತಮಂಗಲ ಒಕ್ಕೂಟದ ಅಧ್ಯಕ್ಷ ಸತೀಶ್ ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕಿ ಅನಿತಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಭವ್ಯ ಸ್ವಾಗತಿಸಿ, ಸೇವಾ ಪ್ರತಿನಿಧಿ ವೇದಾವತಿ ವಂದಿಸಿದರು.










