ಸುಳ್ಯ:ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಗಸ್ಟ್ 15ರಂದು ಅಪರಾಹ್ನ 3ಕ್ಕೆ ಸುಳ್ಯ ನಗರದಲ್ಲಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಗಾಂಧಿಚಿಂತನ ವೇದಿಕೆಯ ಪ್ರಧಾನ ಸಂಚಾಲಕ ಹರೀಶ್ ಬಂಟ್ವಾಳ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ನಗರದ ಮತ್ತು
ತಾಲೂಕಿನ ಎಲ್ಲ ಸಂಘ ಸಂಸ್ಥೆಗಳ ಸಹಭಾಗಿತ್ವ ದೊಂದಿಗೆ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮ ನಡೆಯಲಿದೆ. ಸುಳ್ಯ ನಗರದ ಎಲ್ಲ ವಾರ್ಡ್ ಗಳ ಜನರನ್ನು ಸೇರಿಸಿಕೊಂಡು 3.15ಕ್ಕೆ ಜ್ಯೋತಿ ಸರ್ಕಲ್, ವಿಷ್ಣು ಸರ್ಕಲ್ ಹಾಗೂ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಗಾಂಧಿನಡಿಗೆ ಹೊರಡಲಿದೆ. ‘ಸ್ವಾತಂತ್ರ್ಯ ನಡಿಗೆ’ ಬಸ್ ನಿಲ್ದಾಣದಲ್ಲಿ ಸಂಗಮಿಸಲಿದೆ. ಅಲ್ಲಿ ಸ್ವಾತಂತ್ರ್ಯ ಗೀತೆ ಗಾಯನ ನಡೆಯಲಿದೆ. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸ್ವಾತಂತ್ರ್ಯ ಸಂಕಲ್ಪ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ, ಎಒಎಲ್ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಡಾ.ಯು.ಪಿ.ಶಿವಾನಂದ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಜನಪ್ರತಿನಿಧಿಗಳ ಹಾಗೂ ಪ್ರಮುಖರ ನೇತೃತ್ವದಲ್ಲಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಗಾಂಧಿ ಚಿಂತನ ವೇದಿಕೆಯ ಸಂಚಾಲಕರಾದ ದಿನೇಶ್, ಶಂಕರ ಪೆರಾಜೆ ಉಪಸ್ಥಿತರಿದ್ದರು.