ಮೈಸೂರು:ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನ ಸಾಂಸ್ಕೃತಿಕ ಸಮಿತಿ ಜಿಲ್ಲಾಧ್ಯಕ್ಷರಾಗಿ ಕಲಾವಿದೆ ಡಾ. ಶ್ವೇತಾ ಮಡಪ್ಪಾಡಿ ಇವರನ್ನು ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಇವರ ಆದೇಶದ ಮೇರೆಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ಬಿ.ಜೆ. ವಿಜಯಕುಮಾರ್ ಇವರು ಈ ಆದೇಶವನ್ನು
ಹೊರಡಿಸಿದ್ದಾರೆ. ಕಾಂಗ್ರೆಸ್ ಕಚೇರಿಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಡಾ. ಶ್ವೇತಾ ಮಡಪ್ಪಾಡಿ ಇವರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಯಿತು. ಶ್ವೇತಾ ಕರ್ನಾಟಕ ಸರಕಾರದ ‘ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ’ಯ ಮಾಜಿ ಸದಸ್ಯರು. ಭರತನಾಟ್ಯದಲ್ಲಿ ಪದವೀಧರೆ. ಹಲವು ವೇದಿಕೆಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.ಜಾನಪದ ಹಾಗೂ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಜಾನಪದದಲ್ಲಿ ಪಿಎಚ್.ಡಿ ಪದವಿಯನ್ನು ಕೂಡ ಪಡೆದಿದ್ದಾರೆ.









