ಮಡಿಕೇರಿ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಜುಲೈ 6ರಂದು ಬೆಳಿಗ್ಗೆ 10.30ಕ್ಕೆಜನ ಕೇರ್ಪಳ ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು. ಅವರು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಅಭಿನಂದನಾ
ಸಂಚಿಕೆ ಬಿಡುಗಡೆ ಮಾಡುವರು. ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹಮ್ಮದ್ 55 ಸೇವಾ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದು, ಶಾಸಕರಾದ ಭಾಗೀರಥಿ ಮುರುಳ್ಯ 55 ಸೇವಾ ಚಟುವಟಿಕೆಯ ಸವಲತ್ತು ವಿತರಿಸಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಹಾಗು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹಾಗೂ ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸುವರು.
ಟಿ.ಎಂ.ಶಹೀದ್ ತೆಕ್ಕಿಲ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸನ್ಮಾನಿಸಲಿದ್ದಾರೆ. ಲಯನ್ಸ್ ಕ್ಲಬ್ನ ಮಾಜಿ ಗವರ್ನರ್ ಎಂ.ಬಿ.ಸದಾಶಿವ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ಗೌಡ, ಮಾಜಿ ಸಚಿವ ರಮಾನಾಥ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.
ಟಿ.ಎಂ.ಶಹೀದ್ ತೆಕ್ಕಿಲ್ ಅವರು 2001ರಲ್ಲಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನವನ್ನು ಸ್ಥಾಪಿಸಿ, ಹಲವು ಜನಪರ ಕೆಲಸಗಳನ್ನು ಮಾಡಿದ್ದಾರೆ. ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರಗಳಲ್ಲಿ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರನ್ನು ಸಾರ್ವಜನಿಕವಾಗಿ ಅಭಿನಂದಿಸಲಾಗುದಮವುದು ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಪದಾಧಿಕಾರಿಗಳಾದ ರಾಧಾಕೃಷ್ಣ ಬೊಳ್ಳೂರು, ಇಕ್ಬಾಲ್ ಎಲಿಮಲೆ, ಪರಶುರಾಮ ಚಿಲ್ತಡ್ಕ,ರಂಜಿತ್ ರೈ ಮೇನಾಲ, ಅಬ್ಬಾಸ್ ಅಡ್ಪಂಗಾಯ ಉಪಸ್ಥಿತರಿದ್ದರು.