ಸುಳ್ಯ:ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ 5 ರಸ್ತೆಗಳ ಕಾಂಕ್ರೀಟೀಕರಣ ಕಾಮಗಾರಿಗೆ 2025-26ನೇ ಸಾಲಿನ ಲೆಕ್ಕ ಶೀರ್ಷಿಕೆ 5054 ಯೋಜನೆಯಡಿ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಪಾಜೆ ಗ್ರಾಮದ ಗೂನಡ್ಕ ದರ್ಖಾಸ್ತು ಪೆಲ್ತಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ 50 ಲಕ್ಷ, ಪೆರುಂಗೋಡಿ ಗೂನಡ್ಕ ರಸ್ತೆಗೆ
15 ಲಕ್ಷ, ಗಡಿಕಲ್ಲು ಮುಂಡಡ್ಕ, ರಸ್ತೆ ಕಾಂಕ್ರೀಟೀಕರಣಕ್ಕೆ 10 ಲಕ್ಷ, ಕಲ್ಲುಗುಂಡಿ ಚಟ್ಟೆಕಲ್ಲು ರಸ್ತೆ ಕಾಂಕ್ರೀಟೀಕರಣಕ್ಕೆ 15 ಲಕ್ಷ, ಕಲ್ಲುಗುಂಡಿ ದಂಡೆಕಜೆ ಎಸ್ಸಿ ಕಾಲನಿ ರಸ್ತೆ ಕಾಂಕ್ರೀಟೀಕರಣಕ್ಕೆ 10 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಸಂಪಾಜೆ ಗ್ರಾಮಕ್ಕೆ ಇನ್ನೂ 3 ಕೋಟಿ ವಿಶೇಷ ಅನುದಾನ ತರುವ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.ಕಳೆದ ಕೆಲವು ವರ್ಷಗಳಲ್ಲಿ ಸಂಪಾಜೆ ಗ್ರಾಮಕ್ಕೆ ಸುಮಾರು 10 ಕೋಟಿ ಅನುದಾನ ತಂದಿದ್ದೇನೆ. ಅದೇ ರೀತಿ ಪ್ರತಿಯೊಬ್ಬ ನಾಯಕರೂ ತಮ್ಮ ಗ್ರಾಮಗಳ ಅಭಿವೃದ್ಧಿಗೆ ಅನುದಾನ ತರಿಸಲಿ ಎಂದ ಅವರು ಶಾಸಕರು,ಸಂಸದರು ಸಂಪಾಜೆ ಗ್ರಾಮಕ್ಕೆ ಅನುದಾನ ನೀಡಬೇಕು ಎಂದು ಅವರು ಆಗ್ರಹಿಸಿದರು.
ಸುಳ್ಯದ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಹಾಗೂ 110 ಕೆವಿ ಸಬ್ ಸ್ಟೇಷನ್ ಕಾಮಗಾರಿಗೆ ವೇಗ ಹೆಚ್ಚಿಸಲು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಸುಳ್ಯಕ್ಕೆ ಕರೆಸಿ ಸಭೆ ನಡೆಸಲು ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.
ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್ ಮಾತನಾಡಿ ಸಂಪಾಜೆ ಗ್ರಾಮದ ಅಭಿವೃದ್ಧಿಗೆ ಅನುದಾನ ನೀಡಲು ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅನುದಾನ ನೀಡಿ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ ಎಂದು ಹೇಳಿದರು
ಸುದ್ದಿಗೋಷ್ಠಿಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಎಸ್.ಕೆ.ಹನೀಫ್, ಸದಸ್ಯರಾದ ಜಿ.ಕೆ.ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಡಡ್ಕ, ವಿಮಲಾ ಪ್ರಸಾದ್, ಅನುಪಮಾ ಮುಖಂಡರಾದ ಇಕ್ಬಾಲ್ ಎಲಿಮಲೆ, ರಹೀಂ ಬೀಜದಕಟ್ಟೆ, ಸಿದ್ದಿಕ್ ಕೊಕ್ಕೊ, ಸಲೀಂ ಪೆರುಂಗೋಡಿ, ಅಬ್ದುಲ್ಲಾ ಹಾಜಿ ಕೊಪ್ಪತ್ತಕಜೆ, ಸತ್ಯನಾರಾಯಣ ಭಟ್, ದಿನಕರ ಗೌಡ ಸಣ್ಣಮನೆ,
ಉನೈಸ್ ಗೂನಡ್ಕ ಮತ್ತಿತರರು ಉಪಸ್ಥಿತರಿದ್ದರು