ಬೆಂಗಳೂರು:ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿ ಸರಕಾರ ಆದೇಶಿಸಿದೆ. ಕಾರ್ಮಿಕರ ಕನಿಷ್ಠ ವೇತನದ ಸಮಸ್ಯೆ ಬಗ್ಗೆ ಚರ್ಚಿಸಲು, ಬಗೆಹರಿಸಲು ಇತರ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಕಾರ್ಮಿಕ ಕನಿಷ್ಠ ವೇತನದ ಬಗ್ಗೆ ಅಧ್ಯಯನ ಮಾಡಲು ಹಾಗೂ ಕೇಂದ್ರ ಸರಕಾರದ ಜಾರಿಗೆ ತಂದ ನೂತನ ಕಾರ್ಮಿಕ ಸಂಹಿತೆ ಮೊದಲಾದ ಅಂಶಗಳನ್ನು ಪರಿಗಣಿಸಿ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
















