ಸುಳ್ಯ:ಕರ್ನಾಟಕ ಸರ್ಕಾರ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ಟಿ. ಎಂ. ಶಹೀದ್ ತೆಕ್ಕಿಲ್ ಅವರಿಗೆ ಅ.11 ಶನಿವಾರ ಸಂಜೆ 4 ಗಂಟೆಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಸುಳ್ಯ ಲಯನ್ಸ್ ಸೇವಾ ಸದನ ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿಯ
ಪದಾಧಿಕಾರಿಗಳಾದ ಸದಾನಂದ ಮಾವಜಿ ಮತ್ತು ಕೆ. ಎಂ. ಮುಸ್ತಫ ತಿಳಿಸಿದ್ದಾರೆ.ಅಭಿನಂದನಾ ಸಮಿತಿ, ವಿವಿಧ ಕಾರ್ಮಿಕ ಸಂಘಟನೆಗಳು, ವಿವಿಧ ಸಂಘ ಸಂಸ್ಥೆ ಗಳು ಆಶ್ರಯ ದಲ್ಲಿ ಅಭಿನಂದನಾ ಕಾರ್ಯಕ್ರಮ ಜರಗಲಿದೆ ಎಂದು ಅವರು ತಿಳಿಸಿದ್ದಾರೆ.ಟಿ. ಎಂ. ಶಹೀದ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು , 11ರಂದು ತಾಲೂಕಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.















