ಸುಳ್ಯ:ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ ಸುಳ್ಯ ತಾಲೂಕಿನ ಸಂಪಾಜೆ ಮತ್ತು ಅರಂತೋಡು ಗ್ರಾಮದ
ಮೂಲಭೂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಅವರಿಗೆ ತಿಳಿಸಿ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು ಎಂದು ಮನವಿ ಸಲ್ಲಿಸಲಾಯಿತು. ಸಂಪಾಜೆ ಗ್ರಾಮದಲ್ಲಿ ನೆರೆ,ಪ್ರಳಯ, ಭೂಕಂಪ, ಪ್ರಾಕೃತಿಕ ವಿಕೋಪದಿಂದ ಭಾರೀ ನಷ್ಟ ಉಂಟಾಗಿದ್ದು ತುರ್ತಾಗಿ ಪರಿಹಾರ ಒದಗಿಸಬೇಕು. ಅಲ್ಲದೆ ಎರಡೂ ಗ್ರಾಮಗಳ ರಸ್ತೆ ಮತ್ತಿತರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು ಎಂದು ಮನವಿ ಸಲ್ಲಿಸಲಾಯಿತು. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದು ಟಿ.ಎಂ.ಶಹೀದ್ ತಿಳಿಸಿದ್ದಾರೆ.