ಸುಳ್ಯ: ಸುಳ್ಯ ಕಾಂಗ್ರೆಸ್ನಲ್ಲಿ ಯಾವುದೇ ಗುಂಪುಗಳಿಲ್ಲ, ಇಲ್ಲಿ ಇರುವುದು ಕಾಂಗ್ರೆಸ್ ಗುಂಪು ಮಾತ್ರ ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ. ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆದ ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಎಲ್ಲಾ ಬೇಧ ಭಾವ ಮರೆತು ಕಾಂಗ್ರೆಸ್ನ ಗೆಲುವಿಗಾಗಿ ಎಲ್ಲಾ ಕಾರ್ಯಕರ್ತರು ಪ್ರಯತ್ನ ನಡೆಸಬೇಕು. ಸುಳ್ಯದಲ್ಲಿ ಕಾಂಗ್ರೆಸ್ ಗಟ್ಟಿಯಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ ಇಲ್ಲಿ ಕಾಂಗ್ರೆಸ್ ಶಾಸಕರು ಗೆಲ್ಲಲು ಸಾಧ್ಯ ಎಂದು ಅವರು ಹೇಳಿದರು.




