ಸುಳ್ಯ:ಮತಗಳ್ಳತನ ಪ್ರಕರಣದ ಕುರಿತು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನಜಾಗೃತಿ ಮೂಡಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮಾಡಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನ, ಮತದಾರರ ಪಟ್ಟಿಯ ಲೋಪದೋಷಗಳ ಬಗ್ಗೆ
ಬೆಳಕು ಚೆಲ್ಲಿದ್ದಾರೆ. ಈ ಪ್ರಕರಣದ ಬಗ್ಗೆ ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ಹಾಗೂ ಕಾರ್ಯಕರ್ತರಿಗೆ ಅರಿವು ಮೂಡಿಸುವ ಕೆಲಸಗಳನ್ನು ಮಾಡುತ್ತೇವೆ ಎಂದು ಅವರು ಹೇಳಿದರು.
ಸುಳ್ಯ ತಾಲೂಕಿನಲ್ಲಿ ನೆನೆಗುದಿಗೆ ಬಿದ್ದುರುವ 110 ಕೆ ವಿ ವಿದ್ಯುತ್ ಲೈನ್ ಶೀಘ್ರ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಕಾಂಗ್ರೆಸ್ ನಿಯೋಗ ಭೇಟಿ ಮಾಡಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ಹಾಗೂ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ ಹೇಳಿದರು.
ಸುಳ್ಯದ 110 ಕೆ ವಿ ವಿದ್ಯುತ್ ಲೈನ್ ಹಾಗೂ ಸಬ್ ಸ್ಟೇಷನ್ ಕಾಮಗಾರಿ ವಿಳಂಬವಾಗಲು ಸ್ಥಳೀಯ ಜನಪ್ರತಿನಿಧಿಗಳು ಕಾರಣ ಎಂದು ಆರೋಪಿಸಿದ ಅವರು 110 ಕಾಮಗಾರಿ ನೆನೆಗುದಿಗೆ ಬಿದ್ದಿರುವ ವಿಚಾರವನ್ನು ಸಚಿವರ ಗಮನಕ್ಕೆ ತಂದು ಸುಳ್ಯದಲ್ಲಿ ಇಂಧನ ಸಚಿವರ ನೇತೃತ್ವದಲ್ಲಿ ಸಭೆ ನಡೆಸುವಂತೆ ವಿನಂತಿಸಲಾಗುವುದು ಎಂದು ತಿಳಿಸಿದರು.

110 ಕೆ ವಿ ಲೈನ್ ಹಾಗೂ ಸುಳ್ಯದ ಸಮಗ್ರ ಅಭಿವೃದ್ಧಿ ಕುಂಠಿತಕ್ಕೆ ಸುಳ್ಯದಿಂದ ಗೆದ್ದು ಜನಪ್ರತಿನಿಧಿಗಳಾದವರ ಇಚ್ಛಾಶಕ್ತಿಯ ಕೊರತೆ ಕಾರಣ.
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ 35 ವರ್ಷಗಳಿಂದ ಬಿಜೆಪಿ ಅಧಿಕಾರ ಅನುಭವಿಸುತ್ತಿದೆ, ಆದರೆ 110 ಕೆವಿ ಸಬ್ ಸ್ಟೇಷನ್, ಸುಳ್ಯದ ಶಾಂತಿನಗರ ಕ್ರೀಡಾಂಗಣ , ಅಂಬೆಡ್ಕರ್ ಭವನ ಸೇರಿದಂತೆ ಪ್ರಮುಖ ಸಮಸ್ಯೆಗಳು ಹಾಗೆಯೇ ಉಳಿದಿದೆ. ಇದರ ಪರಿಹಾರಕ್ಕೆ ಯಾವುದೇ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ ಎಂದು ದೂರಿದರು.
ಳಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ , ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ , ಕಾಂಗ್ರೆಸ್ ಮುಖಂಡರಾರ ಇಕ್ಬಾಲ್ ಎಲಿಮಲೆ, ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.





