ದುಬೈ: ಟಿ20 ಕ್ರಿಕೆಟ್ನಲ್ಲಿ ಅಮೋಘ ಸಾಧನೆ ಮಾಡಿರುವ ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್, ಸತತ ಎರಡನೇ ಬಾರಿಗೆ ‘ಐಸಿಸಿ ವರ್ಷದ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.2023ನೇ ಸಾಲಿನಲ್ಲಿ 150ರ ಸ್ಟ್ರೈಕ್ರೇಟ್ನಲ್ಲಿ 50ರ ಸರಾಸರಿಯ ಅಸುಪಾಸಿನಲ್ಲಿ 17 ಪಂದ್ಯಗಳಿಂದ ಸೂರ್ಯಕುಮಾರ್ 733 ರನ್ ಗಳಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಪರ ಮಧ್ಯಮ ಕ್ರಮಾಂಕದಲ್ಲಿ ಆಡಿ ಸೂರ್ಯಕುಮಾರ್ ಯಾದವ್ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post










