ಬಾರ್ಬಡೋಸ್: ಟಿ20 ವಿಶ್ವಕಪ್ ಫೈನಲ್ನಲ್ಲಿ ಇಂದು ಭಾರತ ಗಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ಹತ್ತು ವರ್ಷಗಳಿಂದ ಐಸಿಸಿ ಟ್ರೋಫಿ ಗೆದ್ದಿಲ್ಲ ಎಂಬ ಕೊರಗು ಭಾರತ ತಂಡವನ್ನು ಕಾಡುತ್ತಿದೆ.ಇದೀಗ ದಕ್ಷಿಣ ಆಫ್ರಿಕಾ ತಂಡವನ್ನು ಫೈನಲ್ನಲ್ಲಿ ಮಣಿಸಿ ಅದನ್ನು ನೀಗಿಸಿಕೊಳ್ಳುವ ತವಕದಲ್ಲಿದೆ ಟೀಂ ಇಂಡಿಯಾ.
ಏಳು ತಿಂಗಳುಗಳ ಹಿಂದೆ ಅಹಮದಾಬಾದಿನಲ್ಲಿ ಆಸ್ಟ್ರೇಲಿಯಾ ಎದುರು
(ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್) ಅನುಭವಿಸಿದ್ದ ಸೋಲಿನ ನೋವನ್ನು
ಮರೆಸಲು ಜಯದ ಕಡೆಗೆ ಮುನ್ನುಗ್ಗಲು ಭಾರತ ತಂಡ ಸನ್ನದ್ಧವಾಗಿದೆ. ವಿರಾಟ್ ಕೊಹ್ಲಿ ಮತ್ತು ಶಿವಂ ದುಬೆ ಅವರಿಬ್ಬರನ್ನು ಬಿಟ್ಟರೆ ಉಳಿದೆಲ್ಲರೂ ತಂಡಕ್ಕೆ ಅಗತ್ಯವಿದ್ದ ಸಂದರ್ಭಗಳಲ್ಲಿ ಉಪಯುಕ್ತ ಕಾಣಿಕೆ ನೀಡಿದ್ದಾರೆ.ಭಾರತ ತಂಡವು 2007ರಲ್ಲಿ ನಡೆದಿದ್ದ ಮೊಟ್ಟಮೊದಲ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿತ್ತು. 2014ರ ಏಪ್ರಿಲ್ 6ರಂದು ನಡೆದಿದ್ದ ಟೂರ್ನಿ ಫೈನಲ್ನಲ್ಲಿ ಶ್ರೀಲಂಕಾ ತಂಡವು ಭಾರತ ತಂಡದ ಕನಸನ್ನು ಭಗ್ನಗೊಳಿಸಿತ್ತು. ಅಲ್ಲಿಂದ ಇಲ್ಲಿಯವರೆಗೂ ತಂಡವು ಫೈನಲ್ ಕೂಡ ತಲುಪಿರಲಿಲ್ಲ.
ಸೆಮಿಫೈನಲ್ನಲ್ಲಿ ಮಿಂಚಿದ್ದ ಸ್ಪಿನ್ನರ್ಗಳಾದ ಅಕ್ಷರ್ ಪಟೇಲ್, ಕುಲದೀಪ್ ಯಾದವ್ ವೇಗಿ ಜಸ್ಪ್ರೀತ್ ಬೂಮ್ರಾ ಅಮೋಘ ಲಯದಲ್ಲಿದ್ದಾರೆ ಪ್ರಸಕ್ತ ಟೂರ್ನಿಯಲ್ಲಿ ಒಂದೂ ಪಂದ್ಯ ಸೋಲದ ಭಾರತ–ದಕ್ಷಿಣ ಆಫ್ರಿಕಾ ತಂಡಗಳು ಫೈನಲ್ ಪ್ರವೇಶಿಸಿದೆ.
ತಂಡಗಳು ಭಾರತ: ರೋಹಿತ್ ಶರ್ಮಾ (ನಾಯಕ) ವಿರಾಟ್ ಕೊಹ್ಲಿ ರಿಷಬ್ ಪಂತ್ (ವಿಕೆಟ್ ಕೀಪರ್) ಸೂರ್ಯಕುಮಾರ್ ಯಾದವ್ ಹಾರ್ದಿಕ್ ಪಾಂಡ್ಯ ಶಿವಂ ದುಬೆ ರವೀಂದ್ರ ಜಡೇಜ ಅಕ್ಷರ್ ಪಟೇಲ್ ಜಸ್ಪ್ರೀತ್ ಬೂಮ್ರಾ ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್.
ದಕ್ಷಿಣ ಆಫ್ರಿಕಾ: ಏಡನ್ ಮರ್ಕರಂ (ನಾಯಕ) ಕ್ವಿಂಟನ್ ಡಿ ಕಾಕ್ (ವಿಕೆಟ್ಕೀಪರ್) ರೀಜಾ ಹೆನ್ರಿಕ್ಸ್ ಟ್ರಿಸ್ಟನ್ ಸ್ಟಬ್ಸ್ ಹೆನ್ರಿಚ್ ಕ್ಲಾಸೆನ್ ಡೇವಿಡ್ ಮಿಲ್ಲರ್ ಮಾರ್ಕೊ ಯಾನ್ಸೆನ್ ಕೇಶವ್ ಮಹಾರಾಜ್ ಕಗಿಸೊ ರಬಾಡ ಎನ್ರಿಚ್ ನಾಕಿಯಾ ತಬ್ರೇಜ್ ಶಮ್ಸಿ.
ಪಂದ್ಯ ಆರಂಭ: ರಾತ್ರಿ 8 ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಡಿಡಿ ಸ್ಪೋರ್ಟ್ಸ್ ಹಾಟ್ಸ್ಟಾರ್ ಆ್ಯಪ್