ಕಟಕ್:ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 101 ರನ್ಗಳ ಅಮೋಘ ಜಯಗಳಿಸಿತು.ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ಗಳಲ್ಲಿ ಹಾರ್ದಿಕ್ ಪಾಂಡ್ಯ ಅಬ್ಬರದ ಅರ್ಧಶತಕದ ನೆರವಿನಿಂದ
6 ವಿಕೆಟ್ನಷ್ಟಕ್ಕೆ 175 ರನ್ಗಳನ್ನು ಕಲೆ ಹಾಕಿತ್ತು.176 ರನ್ಗಳ ಗುರಿ ಬೆನ್ನಟ್ಟಿದ ದಕ್ಷಿಣಾ ಆಫ್ರಿಕಾವನ್ನು ಭಾರತದ ಬೌಲರ್ಗಳ ದಾಳಿಗೆ ಕುಸಿದ ದಕ್ಷಿಣ ಆಫ್ರಿಕಾ ತಂಡ 12.3 ಓವರ್ಗಳಲ್ಲಿ 74 ರನ್ಗಳಿಸಿ ಆಲ್ಔಟ್ ಆಯಿತು. ಜಸ್ಪ್ರೀತ್ ಬೂಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ ಅಕ್ಸರ್ ಪಟೇಲ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು.
ಮೊದಲು ಬ್ಯಾಟ್ ಮಾಡಿದ ಭಾರತದ ಪರ ಹಾರ್ದಿಕ್ ಪಾಂಡ್ಯ 59, ತಿಲಕ್ ವರ್ಮಾ 26,ಅಕ್ಸರ್ 23, ಅಭಿಷೇಕ್ ಶರ್ಮಾ 17, ಸೂರ್ಯಕುಮಾರ್ ಯಾದವ್ 12 ರನ್ ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದರು. ಪಾಂಡ್ಯ 28 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 59 ರನ್ ಗಳಿಸಿದರು.













