ಮುಂಬೈ: ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸದ ಟಿ20 ಸರಣಿ ಹಾಗೂ ಜಪಾನ್ನಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್ಗೆ ಟೀಮ್ ಇಂಡಿಯಾದ ಹೊಸ ನಾಯಕನಾಗಿ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ. ಯುವ ಆಟಗಾರ ತಿಲಕ್ ವರ್ಮಾ ಅವರಿಗೆ ಉಪನಾಯಕನ ಪಟ್ಟ ನೀಡಲಾಗಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಶನಿವಾರ ನಡೆಸಿದ ಸುದೀರ್ಘ ಸಭೆಯ
ತಂಡಗಳನ್ನು ಪ್ರಕಟಿಸಿದೆ. ಆದರೆ, ಇವೆಲ್ಲದಕ್ಕಿಂತ ಹೆಚ್ಚಾಗಿ ಇತ್ತೀಚೆಗಷ್ಟೇ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ 35 ವರ್ಷದ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿರುವುದು ಮಾತ್ರವಲ್ಲದೆ, ಇಡೀ ಟಿ20 ತಂಡದಿಂದಲೇ ಕೈಬಿಟ್ಟಿರುವುದು ಕ್ರೀಡಾಲೋಕದಲ್ಲಿ ತಲ್ಲಣ ಸೃಷ್ಟಿಸಿದೆ. ಇದೇ ವೇಳೆ, ಐಪಿಎಲ್ನಲ್ಲಿ ಸಂಚಲನ ಸೃಷ್ಠಿಸಿದ್ದ ಬಿಹಾರದ 15ವರ್ಷದ ಬಾಲಕ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾಗೆ ಆಯ್ಕೆಯಾಗುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.
ಮುಂದಿನ ಎರಡು ವರ್ಷಗಳ ಟಿ20 ಸರಣಿ ಮತ್ತು ಭವಿಷ್ಯದ ಒಲಿಂಪಿಕ್ಸ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಹೇಳಿದ್ದಾರೆ. ಶ್ರೇಯಸ್ ಅಯ್ಯರ್ ನಾಯಕತ್ವದ ಗುಣ ಹಾಗೂ ಸದ್ಯದ ಫಾರ್ಮ್ ಅದ್ಭುತವಾಗಿದೆ.ಹೀಗಾಗಿ ಅವರೇ ಸೂಕ್ತ ಅಭ್ಯರ್ಥಿ ಎಂದು ಸ್ಪಷ್ಟಪಡಿಸಿದ್ದಾರೆ.
15 ವರ್ಷದ ಎಡಗೈ ಬ್ಯಾಟರ್ ವೈಭವ್ ಸೂರ್ಯವಂಶಿ. ಐಪಿಎಲ್ 2026ರ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿ 16 ಪಂದ್ಯಗಳಲ್ಲಿ ಬರೋಬ್ಬರಿ 776 ರನ್ ಚಚ್ಚಿದ್ದ ವೈಭವ್, ಬಿಸಿಸಿಐ ಆಯ್ಕೆಗಾರರ ಗಮನ ಸೆಳೆದಿದ್ದರು. ಐರ್ಲೆಂಡ್, ಇಂಗ್ಲೆಂಡ್ ಪ್ರವಾಸ ಮತ್ತು ಏಷ್ಯನ್ ಗೇಮ್ಸ್ನ ಮೂರೂ ತಂಡಗಳಲ್ಲಿ ಇವರಿಗೆ ಸ್ಥಾನ ಸಿಕ್ಕಿದೆ. ಈ ಮೂಲಕ ಭಾರತದ ಸೀನಿಯರ್ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಗೆ ವೈಭವ್ ಪಾತ್ರರಾಗಿದ್ದಾರೆ.
ಅಲ್ಲದೆ, ಏಷ್ಯನ್ ಗೇಮ್ಸ್ನ ತಂಡದಲ್ಲಿ ಸ್ಟಾರ್ ವೇಗಿ ಜಸ್ಪ್ರಿತ್ ಬುಮ್ರಾ ಅವರನ್ನೂ ಸೇರಿಸಲಾಗಿದೆ.
ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಟಿ20 ತಂಡ:
ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶಿವಂ ದುಬೆ, ನಿತಿಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ.
ಐರ್ಲೆಂಡ್ ವಿರುದ್ಧದ 2 ಪಂದ್ಯಗಳ ಟಿ೨೦ ಸರಣಿ, ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿ, ಜಪಾನ್ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಜೂನ್ 26 ರಿಂದ ಐರ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ ಶ್ರೇಯಸ್ ಅಯ್ಯರ್ ನೇತೃತ್ವದ ತಂಡದ ಅಭಿಯಾನ ಆರಂಭವಾಗಲಿದೆ.







