ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾ ಪ್ರಕಟಗೊಂಡಿದ್ದು, ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಲಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮ ಗೆ ವಿಶ್ರಾಂತಿ ನೀಡಲಾಗಿದೆ .ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿ
ನಡೆಯಲಿದ್ದು, ಕೆರಿಬಿಯನ್ ದ್ವೀಪಗಳು ಹಾಗೂ ಅಮೆರಿಕದ ಫ್ಲಾರಿಡಾದಲ್ಲಿ ಪಂದ್ಯಗಳು ನಡೆಯಲಿದೆ. ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಆಗಸ್ಟ್ 3 ರಂದು ಟ್ರೆನಿಡಾಡ್ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿದ್ದರೆ, ನಂತರದ ಎರಡು ಪಂದ್ಯಗಳು 6 ಹಾಗೂ 8 ರಂದು ಗಯಾನದಲ್ಲಿ ನಡೆಯಲಿದೆ. 12 ಹಾಗೂ 13 ರಂದು ಅಮೆರಿಕದ ಫ್ಲಾರಿಡಾದ ಲೌಡೆರ್ಹಿಲ್ನಲ್ಲಿ ಕೊನೆಯ ಎರಡು ಟಿ20 ಪಂದ್ಯಗಳು ನಡೆಯಲಿದೆ.ಯುವ ಆಟಗಾರರಾದ ತಿಲಕ್ ವರ್ಮ ಹಾಗೂ ಯಶಸ್ವಿ ಜೈಸ್ವಾಲ್ ಟಿ20 ಸರಣಿಯ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ.
ಭಾರತದ ತಂಡ: ಹಾರ್ದಿಕ್ ಪಾಂಡ್ಯ (ನಾಯಕ),
ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.